alex Certify BIG NEWS: ತಾಲೂಕು ಪಂಚಾಯಿತಿ ರದ್ದು ಮಾಡಲು ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಲೂಕು ಪಂಚಾಯಿತಿ ರದ್ದು ಮಾಡಲು ತೀರ್ಮಾನ

ಬೆಂಗಳೂರು: ಮೂರು ಹಂತದ ಪಂಚಾಯಿತಿ ವ್ಯವಸ್ಥೆ ಬದಲಿಗೆ ರಾಜ್ಯದಲ್ಲಿ ಎರಡು ಹಂತದ ಪಂಚಾಯಿತಿ ವ್ಯವಸ್ಥೆ ಜಾರಿಗೆ ಸರ್ಕಾರ ಮುಂದಾಗಿದೆ. ತಾಲೂಕು ಪಂಚಾಯಿತಿಯನ್ನು ರದ್ದುಮಾಡಿ ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿಯನ್ನು ಉಳಿಸಿಕೊಳ್ಳಲಾಗುತ್ತದೆ.

ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯ್ತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಕುಮಾರ್ ಬಂಗಾರಪ್ಪ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಚಾರಕ್ಕೆ ಬಗ್ಗೆ ವಿಧಾನಸಭೆಯಲ್ಲಿ ಭಾರಿ ಚರ್ಚೆ ನಡೆದಿದೆ. ತಾಲೂಕು ಪಂಚಾಯಿತಿಗೆ ಹೆಚ್ಚಿನ ಅನುದಾನ ಇಲ್ಲದ ಕಾರಣ ನಿರುಪಯುಕ್ತ ಸ್ಥಿತಿಗೆ ತಲುಪಿದೆ. ಇದನ್ನು ಕೈಬಿಟ್ಟರೆ ಆಡಳಿತಾತ್ಮಕ ಅನುಕೂಲದ ಜೊತೆಗೆ ವೆಚ್ಚ ಕಡಿಮೆಯಾಗಲಿದೆ. ಇದಕ್ಕೆ ಸಂವಿಧಾನದ ತಿದ್ದುಪಡಿ ಅಗತ್ಯವಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿಯೂ 2 ಹಂತದ ಪಂಚಾಯತಿ ವ್ಯವಸ್ಥೆ ಸೂಕ್ತ ಎಂದು ಹಲವು ಸದಸ್ಯರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...