alex Certify BIG NEWS: ತಾಲೂಕು ಪಂಚಾಯಿತಿ ರದ್ದು ಬಗ್ಗೆ ಶೀಘ್ರ ನಿರ್ಣಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಲೂಕು ಪಂಚಾಯಿತಿ ರದ್ದು ಬಗ್ಗೆ ಶೀಘ್ರ ನಿರ್ಣಯ

ಬೆಂಗಳೂರು: ತಾಲೂಕು ಪಂಚಾಯಿತಿ ರದ್ದು ಮಾಡುವ ಕುರಿತಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಿ ನಿರ್ಣಯ ಅಂಗೀಕರಿಸಲಾಗುವುದು. ಬಳಿಕ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಹಂತದ ಪಂಚಾಯಿತಿ ವ್ಯವಸ್ಥೆ ಇದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಾಲೂಕು ಪಂಚಾಯಿತಿ ಕೈ ಬಿಡುವ ಕುರಿತು ಚರ್ಚೆ ನಡೆದಿದ್ದು, ಸಲಹಾ ಸಮಿತಿ ಸಭೆಯ ಅಜೆಂಡಾದಲ್ಲಿ ಈ ವಿಚಾರ ಇರಲಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...