ವಿರುಧುನಗರ : ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ವಿರುಧುನಗರ ಜಿಲ್ಲೆಯಲ್ಲಿ ಶನಿವಾರ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಮತ್ತು ಸ್ಫೋಟದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೆಂಬ್ಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ಮೃತರ ಸಂಬಂಧಿಕರಿಗೆ 3 ಲಕ್ಷ ರೂ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ.ಗಳ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ವೆಂಬಕೊಟ್ಟೈನ ಕುಂದೈರುಪ್ಪು ಗ್ರಾಮದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಶನಿವಾರ ಮಧ್ಯಾಹ್ನ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಸ್ಫೋಟದಲ್ಲಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವಿರುದ್ನಗರ ಜಿಲ್ಲಾಧಿಕಾರಿ ವಿ.ಪಿ.ಜಯಶೀಲನ್ ತಿಳಿಸಿದ್ದಾರೆ.