ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು 63 ವರ್ಷದ ವಿ. ಗಿರಿಜಾ, 55 ವರ್ಷದ ಎಸ್. ರಾಧಾ ಮತ್ತು ಅವರ ಸಹೋದರ 48 ವರ್ಷದ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ.
ಮಗನೊಂದಿಗೆ ದುಬೈನಲ್ಲಿ ವಾಸಿಸುತ್ತಿದ್ದ ಗಿರಿಜಾ ಅವರ ಪತಿಯ ಪ್ರಥಮ ಪುಣ್ಯಸ್ಮರಣೆ ಆಚರಿಸಲು ಕುಟುಂಬವು ನಗರಕ್ಕೆ ಬಂದಿತ್ತು. ಅವರು ಮಲಗಿದ್ದ ವೇಳೆ ಫ್ರಿಡ್ಜ್ ಸ್ಫೋಟಗೊಂಡು ಹೊಗೆ ಆವರಿಸಿದೆ. ಅವರು ಉಸಿರುಕಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ.
ಅವರ ನೆರೆಹೊರೆಯವರು ಬಾಗಿಲು ಒಡೆದು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮನೆಯೊಳಗಿದ್ದ ಇನ್ನಿಬ್ಬರು ಮಹಿಳೆಯರು ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.