9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತಮಿಳುನಾಡು ಎಐಎಡಿಂಕೆ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಈ ವಿಚಾರವಾಗಿ ಮಾತನಾಡಿದ ತಮಿಳುನಾಡು ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ, ವೈದ್ಯಕೀಯ ತಜ್ಞರು ನೀಡಿರುವ ಮಾಹಿತಿ ಆಧರಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಸಾಂಕ್ರಾಮಿಕ ರೋಗ ಹೆಚ್ಚಿರುವ ಈ ಸ್ಥಿತಿಯಲ್ಲಿ ಪರೀಕ್ಷೆ ನಡೆಸೋದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಿದ್ರು.