alex Certify BIG NEWS: ಕೃಷಿ ಪಂಪ್ಸೆಟ್ ಗೆ ನಿರಂತರ 24 ಗಂಟೆ ತ್ರೀ ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷಿ ಪಂಪ್ಸೆಟ್ ಗೆ ನಿರಂತರ 24 ಗಂಟೆ ತ್ರೀ ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ

ಚೆನ್ನೈ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ವಿವಿಧ ಕೊಡುಗೆ ಘೋಷಿಸುತ್ತಿರುವ ತಮಿಳುನಾಡು ಸಿಎಂ ಪಳನಿಸ್ವಾಮಿ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ.

ಇತ್ತೀಚೆಗಷ್ಟೇ ರೈತರ 12,110 ಕೋಟಿ ರೂಪಾಯಿ ಸಾಲ ಮನ್ನಾ ಘೋಷಣೆ ಮಾಡಿದ್ದ ಸಿಎಂ ಪಳನಿಸ್ವಾಮಿ, ರೈತರಿಗೆ ದಿನದ 24 ಗಂಟೆಯೂ ನಿರಂತರ ತ್ರೀ ಫೇಸ್ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ್ದಾರೆ.

ಉದುಮಲೈಪೆಟ್ಟೈನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರೈತರ ಬೇಡಿಕೆಯಂತೆ ಕೃಷಿ ಪಂಪ್ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ಹಲವೆಡೆ 12 ಗಂಟೆ ಮತ್ತೆ ಕೆಲವೆಡೆ 6 ಗಂಟೆ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ನಿರಂತರ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...