ಚೆನ್ನೈ: ಸರ್ಕಾರಿ ಶಾಲೆಯ ಮಕ್ಕಳಿಗೆ ಶೇಕಡ 7.5 5ರಷ್ಟು ಮೀಸಲಾತಿ ನೀಡಲು ತಮಿಳುನಾಡು ಸರ್ಕಾರ ವಿಧೇಯಕ ಮಂಡಿಸಿದೆ.
ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೃಷಿ, ಮೀನುಗಾರಿಕೆ, ಕಾನೂನು, ಇಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಶೇಕಡ 7.5 ರಷ್ಟು ಮೀಸಲಾತಿ ಒದಗಿಸಲಾಗುವುದು.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಸರ್ಕಾರಿ ಶಾಲೆ ಮಕ್ಕಳಿಗೆ ಮೀಸಲಾತಿ ಒದಗಿಸುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ಹೇಳಿದ್ದಲ್ಲದೇ, ಬಜೆಟ್ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡುವುದಾಗಿ ತಿಳಿಸಿದ್ದರು.
ಅಂತೆಯೇ ಸ್ಟಾಲಿನ್ ವಿಧೇಯಕ ಮಂಡಿಸಿದ್ದು, ಗ್ರಾಮೀಣ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.