ಚೆನ್ನೈ: ತಮಿಳುನಾಡು ಡಿಎಂಕೆ ಶಾಸಕ ಮತ್ತು ಪಕ್ಷದ ಯುವ ವಿಭಾಗದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ಉದಯನಿಧಿ ಅವರಿಗೆ ರಾಜ್ಯಲರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಉದಯನಿಧಿ ಅವರು ತಮ್ಮ ಟ್ರೇಡ್‌ಮಾರ್ಕ್ ಬಿಳಿ ಅಂಗಿಯನ್ನು ಧರಿಸಿ ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 10 ನಿಮಿಷದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿಯಿತು. 45 ವರ್ಷದ ಉದಯನಿಧಿ ಅವರನ್ನು ರಾಜ್ಯ ಸಚಿವರು ಮತ್ತು ಪಕ್ಷದ ಹಿರಿಯ ನಾಯಕರು ಅಭಿನಂದಿಸಿದ್ದಾರೆ.