ಚೆನ್ನೈ: ತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಸತ್ತೂರು ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.
ಸ್ಫೋಟದ ಸಂದರ್ಭದಲ್ಲಿ ಸ್ಥಳದಲ್ಲೇ 9 ಜನ ಸಾವನ್ನಪ್ಪಿದ್ದು, ಉಳಿದ 10 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ 2 ಲಕ್ಷ ರೂ., ತಮಿಳುನಾಡು ಮುಖ್ಯಮಂತ್ರಿ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರದಿಂದ ತಲಾ 1.50 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಪಟಾಕಿ ತಯಾರಿಕೆ ರಾಸಾಯನಿಕ ಮಿಶ್ರಣ ಮಾಡುವ ವೇಳೆಯಲ್ಲಿ ಸ್ಪೋಟ ಸಂಭವಿಸಿದ್ದು, ಈ ವೇಳೆ ಸ್ಥಳದಲ್ಲಿ 50 ಕ್ಕೂ ಅಧಿಕ ಮಂದಿ ಕೆಲಸ ಮಾಡುತ್ತಿದ್ದರು. ಸ್ಪೋಟದ ತೀವ್ರತೆಗೆ 10 ಕೊಠಡಿಗಳು ನೆಲಸಮವಾಗಿವೆ ಎನ್ನಲಾಗಿದೆ.