alex Certify ಹಬ್ಬದ ದಿನವೇ ಘೋರ ದುರಂತ: ಪಟಾಕಿ ಗೋದಾಮಿನಲ್ಲಿ ಸ್ಪೋಟ; 8 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ದಿನವೇ ಘೋರ ದುರಂತ: ಪಟಾಕಿ ಗೋದಾಮಿನಲ್ಲಿ ಸ್ಪೋಟ; 8 ಜನ ಸಾವು

ತಮಿಳುನಾಡು ಕಾಂಚೀಪುರಂ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ

ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದ ಪಟಾಕಿ ಗೋದಾಮಿನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಕಾಂಚೀಪುರಂ ಕಲೆಕ್ಟರ್ ಎಂ. ಆರತಿ ಹೇಳಿದ್ದಾರೆ.

ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬುಧವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದಾಗ ಕಾರ್ಖಾನೆಯ ಘಟಕದಲ್ಲಿ 25 ಜನರು ಕೆಲಸ ಮಾಡುತ್ತಿದ್ದರು. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಾರೆ. ನಾವು ಹೆಚ್ಚಿನ ವಿವರಗಳನ್ನು ತಿಳಿದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...