ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 3.21 ಕೋಟಿ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ.
ಶ್ರೀವಿಲ್ಲಿಪುತೂರ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಭಾರೀ ಜೋರಾಗಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಇದೇ ಹೊತ್ತಲ್ಲಿ ಹಣದ ಹೊಳೆಯೇ ಹರಿಯುತ್ತಿದೆ.