ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಕಾವೇರಿದ್ದು, ಮತದಾರರನ್ನು ಸೆಳೆಯಲು ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ಜನಪ್ರಿಯ ಯೋಜನೆ ಘೋಷಣೆ ಮಾಡಲಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೂ ಉಚಿತವಾಗಿ ವಾಷಿಂಗ್ ಮಷಿನ್, ಸರ್ಕಾರಿ ಉದ್ಯೋಗಿಗಳು ಇಲ್ಲದ ಬಡ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ನೀಡಲಾಗಿದೆ.
ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಪ್ರತಿ ಕುಟುಂಬಕ್ಕೆ ವರ್ಷಕ್ಕೆ 6 ಸಿಲಿಂಡರ್ ಉಚಿತವಾಗಿ ನೀಡಲಾಗುವುದು. ಮಹಿಳಾ ಮುಖ್ಯಸ್ಥರು ಇರುವ ಕುಟುಂಬಕ್ಕೆ ಮಾಸಿಕ 1500 ರೂಪಾಯಿ ನೆರವು ನೀಡಲಾಗುವುದು. ಜಯಲಲಿತಾ ಹೆಸರಿನಲ್ಲಿ ವಸತಿ ಯೋಜನೆ ಆರಂಭಿಸಲಿದ್ದು ಗ್ರಾಮೀಣ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಡಲಾಗುವುದು. ಅಲ್ಲದೇ, ಮಹಿಳೆಯರಿಗೆ ಸರ್ಕಾರಿ ಬಸ್ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವುದು ಸೇರಿದಂತೆ ಹಲವು ಭರವಸೆ ನೀಡಲಾಗಿದೆ.