ಚೆನ್ನೈ: ಚೆನ್ನೈನ ಮರೀನಾ ಬೀಚ್ ನಲ್ಲಿ ಎಂ. ಕರುಣಾನಿಧಿ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಸ್ಮಾರಕ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಸ್ಮಾರಕವನ್ನು 39 ಕೋಟಿ ರೂಪಾಯಿ ವೆಚ್ಚದಲ್ಲಿ 2.21 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು. ಕರುಣಾನಿಧಿ ಅವರ ಸಾಧನೆ, ಜೀವನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಚಿತ್ರಣವನ್ನು ಒಳಗೊಂಡ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ.
ಉದಯಿಸುತ್ತಿರುವ ಸೂರ್ಯನ ಆಕಾರದಲ್ಲಿ ಮತ್ತು ಬೃಹತ್ ಪೆನ್ ಒಳಗೊಂಡಂತೆ ಕರುಣಾನಿಧಿ ಸ್ಮಾರಕ ನಿರ್ಮಾಣವಾಗಲಿದೆ. 10 ಬಾರಿ ಡಿಎಂಕೆ ಅಧ್ಯಕ್ಷರಾಗಿ, 5 ಸಲ ತಮಿಳುನಾಡು ಮುಖ್ಯಮಂತ್ರಿಯಾಗಿ ಕರುಣಾನಿಧಿ ಕಾರ್ಯನಿರ್ವಹಿಸಿದ್ದಾರೆ.