alex Certify 2.21 ಎಕರೆಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ 5 ಸಲ ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಸ್ಮಾರಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2.21 ಎಕರೆಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ 5 ಸಲ ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಸ್ಮಾರಕ

ಚೆನ್ನೈ: ಚೆನ್ನೈನ ಮರೀನಾ ಬೀಚ್ ನಲ್ಲಿ ಎಂ. ಕರುಣಾನಿಧಿ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಸ್ಮಾರಕ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಸ್ಮಾರಕವನ್ನು 39 ಕೋಟಿ ರೂಪಾಯಿ ವೆಚ್ಚದಲ್ಲಿ 2.21 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು. ಕರುಣಾನಿಧಿ ಅವರ ಸಾಧನೆ, ಜೀವನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಚಿತ್ರಣವನ್ನು ಒಳಗೊಂಡ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ.

ಉದಯಿಸುತ್ತಿರುವ ಸೂರ್ಯನ ಆಕಾರದಲ್ಲಿ ಮತ್ತು ಬೃಹತ್ ಪೆನ್ ಒಳಗೊಂಡಂತೆ ಕರುಣಾನಿಧಿ ಸ್ಮಾರಕ ನಿರ್ಮಾಣವಾಗಲಿದೆ. 10 ಬಾರಿ ಡಿಎಂಕೆ ಅಧ್ಯಕ್ಷರಾಗಿ, 5 ಸಲ ತಮಿಳುನಾಡು ಮುಖ್ಯಮಂತ್ರಿಯಾಗಿ ಕರುಣಾನಿಧಿ ಕಾರ್ಯನಿರ್ವಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...