![](https://kannadadunia.com/wp-content/uploads/2017/02/edappadi-k-palanisamy.jpg)
ಚೆನ್ನೈ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಕೆಲವೇ ಗಂಟೆಯ ಮೊದಲು ತಮಿಳುನಾಡು ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು, ಚಿನ್ನದ ಮೇಲಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ರೈತರು ಮತ್ತು ಬಡವರು ಸಹಕಾರಿ ಬ್ಯಾಂಕುಗಳಲ್ಲಿ ಚಿನ್ನ ಅಡವಿಟ್ಟು ಪಡೆದುಕೊಂಡ ಸಾಲ ಮನ್ನಾ ಮಾಡುವುದಾಗಿ ಹೇಳಲಾಗಿದೆ.
ಕೇಂದ್ರ ಚುನಾವಣಾ ಆಯೋಗ ತಮಿಳುನಾಡು ವಿಧಾನಸಭೆ ಚುನಾವಣೆ ಸೇರಿ 5 ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಕೆಲ ಗಂಟೆಗಳ ಮೊದಲು ಸಿಎಂ ಪಳನಿಸ್ವಾಮಿ ಸಹಕಾರಿ ಬ್ಯಾಂಕುಗಳಿಂದ ನೀಡಿದ ಚಿನ್ನದ ಮೇಲಿನ ಸಾಲ ಮನ್ನಾ ಮಾಡುವುದಾಗಿ ಆದೇಶ ಹೊರಡಿಸಿದ್ದಾರೆ.