ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಬುಧವಾರ ನಡೆದ ದುರಂತದಲ್ಲಿ ನಕಲಿ ಮದ್ಯ ಸೇವಿಸಿ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ
ದುರಂತ ವರದಿಯಾದ ನಂತರ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಕ್ಷಿಪ್ರ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ. ಕಲ್ಕುರಿಚಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ಪ್ರಶಾಂತ್ ನೇಮಕಗೊಂಡಿದ್ದಾರೆ.
ಅಲ್ಲದೆ, ಕಲ್ಲಕುರಿಚಿ ಎಸ್ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಲಾಗಿದೆ. ಅವರ ಜಾಗಕ್ಕೆ ಸರ್ಕಾರ ರಜತ್ ಚತುರ್ವೇದಿ ಅವರನ್ನು ನೂತನ ಎಸ್ಪಿಯನ್ನಾಗಿ ನೇಮಿಸಿದೆ. ಹಲವು ಪೊಲೀಸ್ ಅಧಿಕಾರಿಗಳನ್ನು ಕೂಡ ಅಮಾನತು ಮಾಡಲಾಗಿದೆ.
ಇದೇ ವೇಳೆ ನಕಲಿ ಮದ್ಯ ದಂಧೆಕೋರನನ್ನು ಬಂಧಿಸಲಾಗಿದೆ. ತಮಿಳುನಾಡು ಅಧಿಕಾರಿಗಳ ಪ್ರಕಾರ, ಅವರು 200 ಲೀಟರ್ ”ಮೆಥೆನಾಲ್” ಮಿಶ್ರಿತ ಮದ್ಯ ವಶಕ್ಕೆ ಪಡೆಯಲಾಗಿದೆ.