ಚೆನ್ನೈ: ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ. ಈ ಕಾರಣಕ್ಕೆ ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಳ್ಳಬೇಕೇ ಎಂದು ಮದ್ರಾಸ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ಇಳಿಸಿಲ್ಲ. ಆ ರಾಜ್ಯಗಳಿಗೆ ಹೆಚ್ಚು ಲೋಕಸಭೆ ಸೀಟು ಏಕೆ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗಂಭೀರ ಪ್ರಶ್ನೆ ಎತ್ತಿದೆ.
1967 ರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತದೆ. ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಲೋಕಸಭಾ ಕ್ಷೇತ್ರಗಳನ್ನು ಕಡಿತಗೊಳಿಸುತ್ತಿರುವುದು ಸರಿಯಲ್ಲ. ಇದರಿಂದ ರಾಜಕೀಯ ಪ್ರಾತಿನಿಧ್ಯ ಕಸಿದುಕೊಂಡಂತಾಗುತ್ತದೆ. ಜನಸಂಖ್ಯೆಯನ್ನು ನಿಯಂತ್ರಣ ಮಾಡದ ಉತ್ತರ ಭಾರತದ ರಾಜ್ಯಗಳಿಗೆ ಇದರಿಂದ ಲಾಭವಾಗಲಿದೆ. ಜನಸಂಖ್ಯೆ ನಿಯಂತ್ರಣ ಮಾಡಿದ್ದಕ್ಕೆ ತಮಿಳುನಾಡಿಗೆ ಎರಡು ಲೋಕಸಭೆ ಕ್ಷೇತ್ರ ಕಡಿತವಾಗಿದೆ. ಸಂಸತ್ತಿನಲ್ಲಿ ಪ್ರಾತಿನಿಧ್ಯ ಕಡಿಮೆಯಾಗದಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಕೋರ್ಟ್ ತಿಳಿಸಿದೆ.
ಜನಸಂಖ್ಯೆಯನ್ನು ನಿಯಂತ್ರಿಸುವ ರಾಜ್ಯಗಳು ಏಕೆ ಲೋಕಸಭೆ ಕ್ಷೇತ್ರಗಳನ್ನು ಏಕೆ ಕಳೆದುಕೊಳ್ಳಬೇಕು? ಇದಕ್ಕಾಗಿ ಸಂಸತ್ತಿನಲ್ಲಿ ತಿದ್ದುಪಡಿ ತರಬೇಕಿದೆ ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿದ್ದು, ರಾಜಕೀಯ ಪಕ್ಷಗಳು ಮತ್ತು ಕೇಂದ್ರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿದೆ.