ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನ್ನ ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಹೇಳಿದೆ.
ಬುಧವಾರ ಸಂಸ್ಥೆಯು ಬಾಲಾಜಿಯನ್ನು ವಶಪಡಿಸಿಕೊಳ್ಳುವ ಮತ್ತು ಅಧಿಕಾರವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಮೂರ್ತಿ ಸಿ.ವಿ. ಕಾರ್ತಿಕೇಯನ್ ಅವರ ಮುಂದೆ ತಮ್ಮ ಹೇಳಿಕೆ ಸಲ್ಲಿಸಿದರು. ಸೆಂಥಿಲ್ ಬಾಲಾಜಿ ಬಂಧನ ಸಿಂಧು ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿದೆ.