ಈರೋಡ್ ಸಂಸದ ಮತ್ತು ಎಂಡಿಎಂಕೆ ಹಿರಿಯ ಮುಖಂಡ ಎ.ಗಣೇಶಮೂರ್ತಿ ಅವರು ಇಂದು ಮುಂಜಾನೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಎಂಡಿಎಂಕೆ ನಾಯಕ ಬೆಳಿಗ್ಗೆ 5 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಟಿಕೆಟ್ ತಪ್ಪಿದ ಹಿನ್ನೆಲೆ ತಮಿಳುನಾಡಿನ ಡಿಎಂ ಕೆ ಸಂಸದ ಎ.ಗಣೇಶಮೂರ್ತಿ, ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆ ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಎಂಡಿಎಂಕೆಯ ಗಣೇಶ್ ಮೂರ್ತಿ ಈರೋಡ್ ಕ್ಷೇತ್ರದ ಸಂಸದರಾಗಿದ್ದರು. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಅವರು ಖಿನ್ನತೆಯಲ್ಲಿದ್ದರು ಎಂದು ಹೇಳಲಾಗುತ್ತಿದೆ. ಮಾರ್ಚ್ 24 ರಂದು ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡ ಗಣೇಶ್ ಮೂರ್ತಿ ತಮ್ಮ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದಾಗ ಹೃದಯಾಘಾತದಿಂದ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.