alex Certify ಭಾರಿ ಮಳೆಗೆ ತತ್ತರಿಸಿದ ತಮಿಳುನಾಡು: 19 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಗೆ ತತ್ತರಿಸಿದ ತಮಿಳುನಾಡು: 19 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ಚೆನ್ನೈ ಮಹಾನಗರದಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪರಿಹಾರ ಕೇಂದ್ರಗಳಲ್ಲಿ 5000ಕ್ಕೂ ಅಧಿಕ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಮಿಳುನಾಡಿನ ಹಲವು ಕಡೆ ಭಾರಿ ಮಳೆ ಮುಂದುವರೆದಿದೆ. ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪುದುಚೇರಿ, ಕಾರೈಕಲ್ ನಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಸರ್ಕಾರ ಇವತ್ತು ಭಾರೀ ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...