ಚೆನ್ನೈ: ತಮಿಳುನಾಡಿನ ವಿಲ್ಲುಪ್ಪುರಂನಲ್ಲಿ ಜಂಕ್ಷನ್ ನಲ್ಲಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಕಾರ್ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಅಪಘಾತದಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಎಂ ಸ್ಟಾಲಿನ್ ಗಾಯಾಳುಗಳಿಗೆ ನಗದು ನೆರವು ಘೋಷಿಸಿದ್ದಾರೆ. ಕಾರ್ ಪುದುಚೇರಿ ಕಡೆಗೆ ಹೋಗುತ್ತಿದ್ದಾಗ ಕೀಜುಪುತುಪಟ್ಟಿಯಲ್ಲಿ ಅಪಘಾತ ಸಂಭವಿಸಿದೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.