alex Certify ಜನರ ಗುಂಪಿನ ಮೇಲೆ ನುಗ್ಗಿದ ಕಾರ್: ಮೂವರು ಮಹಿಳೆಯರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನರ ಗುಂಪಿನ ಮೇಲೆ ನುಗ್ಗಿದ ಕಾರ್: ಮೂವರು ಮಹಿಳೆಯರು ಸಾವು

ಚೆನ್ನೈ: ತಮಿಳುನಾಡಿನ ವಿಲ್ಲುಪ್ಪುರಂನಲ್ಲಿ ಜಂಕ್ಷನ್‌ ನಲ್ಲಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಕಾರ್ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಪಘಾತದಲ್ಲಿ ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಎಂ ಸ್ಟಾಲಿನ್ ಗಾಯಾಳುಗಳಿಗೆ ನಗದು ನೆರವು ಘೋಷಿಸಿದ್ದಾರೆ. ಕಾರ್ ಪುದುಚೇರಿ ಕಡೆಗೆ ಹೋಗುತ್ತಿದ್ದಾಗ ಕೀಜುಪುತುಪಟ್ಟಿಯಲ್ಲಿ ಅಪಘಾತ ಸಂಭವಿಸಿದೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...