alex Certify ಕಾಮದ ಮದದಲ್ಲಿ ಮದ್ಯವ್ಯಸನಿಯಿಂದ ಹೇಯಕೃತ್ಯ: ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ಮದ್ಯವ್ಯಸನಿಯಿಂದ ಹೇಯಕೃತ್ಯ: ಆರೋಪಿ ಅರೆಸ್ಟ್

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ಪ್ರದೇಶದಲ್ಲಿ 90 ವರ್ಷದ ವೃದ್ಧೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

20 ವರ್ಷದ ಎ. ಮೈದೀನ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಕುಮಾರನ್ ನಗರ ನಿವಾಸಿಯಾಗಿರುವ ಆರೋಪಿ ಮದ್ಯವ್ಯಸನಿಯಾಗಿದ್ದ. ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆರೋಪಿ ಮಂಗಳವಾರ ರಾತ್ರಿ ಕೃಷಿ ಜಮೀನಿನಲ್ಲಿದ್ದ ಮನೆಯಲ್ಲಿ ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಪಕ್ಕದ ಕೊಠಡಿಯಲ್ಲಿ ಮಲಗಿದ್ದ ವೃದ್ಧೆಯ ಮಗ ರಕ್ಷಣೆಗೆ ಧಾವಿಸಿದ್ದು, ಈ ವೇಳೆ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ. ಮಹಿಳೆಯ ಮಗ ಮತ್ತು ಸಂಬಂಧಿಕರು ಆರೋಪಿಯನ್ನು ಹಿಡಿದು ಪೊಲ್ಲಾಚಿ ಪಶ್ಚಿಮ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...