ಚೆನ್ನೈ: ತಮಿಳುನಾಡು ವಿಧಾನಮಂಡಲ ಅಧಿವೇಶನದಲ್ಲಿ ಹೈಡ್ರಾಮಾ ನಡೆದಿದೆ. ರಾಜ್ಯಪಾಲ ಆರ್.ಎನ್.ರವಿ ಸಾಂಪ್ರದಾಯಿಕ ಭಾಷಣ ಓದಲು ನಿರಾಕರಿಸಿ ಸದನದಿಂದಲೇ ಹೊರ ನಡೆದ ಘಟನೆ ನಡೆದಿದೆ.
ಅಧಿವೇಶನ ಆರಂಭವಾಗುತ್ತಿದ್ದಂತೆ ರಾಷ್ಟ್ರಗೀತೆ ಹಾಡಬೇಕು ಎಂದು ಸಲಹೆ ನೀಡಿದ್ದೆ. ಸದನ ಆರಂಭವಾಗುತ್ತಿದ್ದಂತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲು ಸೂಚಿಸಿದ್ದೆ. ಆದರೆ ಹಾಗೆ ಮಾಡಿಲ್ಲ. ಅಧಿವೇಶನ ಆರಂಭವಾಗುತ್ತಿದ್ದಂತೆ ರಾಷ್ಟ್ರಗೀತೆ ಹಾಡಲು ನಿರ್ಲಕ್ಷ ಮಾಡಿದ್ದಾರೆ. ರಾಷ್ಟ್ರಗೀತೆಗೆ ಗೌರವ ಕೊಡದ ಕಾರಣ ನನಗೆ ಭಾಷಣ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿ ರಾಜ್ಯಪಾಲ ಆರ್.ಎನ್.ರವಿ ವಿಧಾನಸಭೆಯಿಂದ ಹೊರನಡೆದಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸರ್ಕಾರ ರಾಷ್ಟ್ರಗೀತೆಗೆ ಅವಮಾನ ಮಾಡಿದೆ. ಹಾಗಾಗಿ ವಿಧಾನಸಭೆಯಲ್ಲಿ ಸರ್ಕಾರ ನೀಡಿದ ಭಾಷಣದ ಪ್ರತಿಯನ್ನು ಓದಲು ನಿರಾಕರಿಸಿದರು. ಅಲ್ಲದೇ ಭಾಷಣ ಪ್ರತಿಯಲ್ಲಿ ಇದ್ದ ಕೆಲ ಟೀಕೆಗಳನ್ನು ನಾನು ಒಪ್ಪಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ. ತಕ್ಷಣ ಭಾಷಣ ಮಾಡಲು ನಿರಾಕರಿಸಿ ವಿಧಾನಸಭೆಯಿಂದ ಹೊರನಡೆದಿದ್ದಾರೆ.