ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಒಂದೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದೆಡೆ ಕಾವೇರಿ ನೀರು ವಿವಾದ ಕುರಿತ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಈ ಮಧ್ಯೆ ತಮಿಳುನಾಡಿಗೆ ಹರಿಸಲಾಗುತ್ತಿದ್ದ ಕಾವೇರಿ ನೀರಿನ ಪ್ರಮಾಣವನ್ನು ರಾಜ್ಯ ಸರ್ಕಾರ ಕಡಿಮೆ ಮಾಡಿದೆ. 10 ಸಾವಿರ ಕ್ಯೂಸೆಕ್ ನೀರಿನಿಂದ 5 ಸಾವಿರ ಕ್ಯೂಸೆಕ್ ನೀರಿಗೆ ಕಡಿಮೆ ಮಾಡಲಾಗಿದೆ.
ಕೆ.ಆರ್.ಎಸ್ ನಿಂದ ಪ್ರತಿದಿನ 10-12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿತ್ತು. ಆದರೆ ಇಂದು ಕೆ.ಆರ್.ಎಸ್ ನಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ 5,033 ಕ್ಯೂಸೆಕ್ ನೀರು ಮಾತ್ರ ಬಿಡಲಾಗಿದೆ.
ಕೆ.ಆರ್.ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಆದರೆ ಸಧ್ಯ ಜಲಾಶಯದಲ್ಲಿ ಇರುವ ನೀರಿನ ಮಟ್ಟ 102.74 ಅಡಿ. ಈವರೆಗೆ ಕೆ.ಆರ್.ಎಸ್ ನಿಂದ ತಮಿಳುನಾಡಿಗೆ 8 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ.