![](https://kannadadunia.com/wp-content/uploads/2023/01/accident.1.38550.jpg)
ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ.
26 ವರ್ಷದ ರಫಿಯಾಬೇಗಂ ಮೃತಪಟ್ಟ ಮಹಿಳೆ. ಸಬಿನಾ ಅವರ ಕಾಲಿನ ಮೇಲೆ ಪೆಟ್ರೋಲ್ ಟ್ಯಾಂಕರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ದಾಟುತ್ತಿದ್ದ ಮಹಿಳೆಯರ ಮೇಲೆ ಪೆಟ್ರೋಲ್ ಟ್ಯಾಂಕರ್ ನುಗ್ಗಿದ್ದು, ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬಳ್ಳಾರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.