ಮೈಸೂರು : ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳುತ್ತಿದ್ದ ವೇಳೆ ಟಂಟಂ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು, ಹಲವರಿಗೆ ಗಾಯಗಳಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಅಪಘಾತದಲ್ಲಿ ದರ್ಶನ್ (20) ಎಂಬ ಯುವಕ ಮೃತಪಟ್ಟಿದ್ದು, ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಟಿ ನರಸೀಪುರ ಮುಖ್ಯ ರಸ್ತೆಯ ಮೆಗಳಾಪುರ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ದರ್ಶನ್ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.