ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ.
ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾಗಿ ಉತ್ತಮ್ ಕಾರ್ಯನಿರ್ವಹಿಸುತ್ತಿದ್ದರು. ವಾಕಿಂಗ್ ಹೋಗುವುದಾಗಿ ಮನೆಯಿಂದ ಹೊರಗೆ ಬಂದಿದ್ದರು ಎನ್ನಲಾಗಿದೆ.
ರೈಲಿಗೆ ಸಿಲುಕಿ ಡಾ. ಉತ್ತಮ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಭದ್ರಾವತಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.