![](https://kannadadunia.com/wp-content/uploads/2024/08/cash-cash-500-rs.png)
ನವದೆಹಲಿ: ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಹಂಚಿಕೆ ಮಾಡಿದೆ.
ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. ಬದಲಾಗಿ ರಾಜ್ಯ ಸರ್ಕಾರಗಳಿಗೆ 1,73,030 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯಗಳು ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳಿಗೆ ಆರ್ಥಿಕ ನೆರವು ಒದಗಿಸಲು ಈ ತಿಂಗಳು ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಮಂತ್ರಾಲಯ ಮಾಹಿತಿ ನೀಡಿದೆ.
15ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇಕಡ 41ರಷ್ಟನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುವುದು. ಕರ್ನಾಟಕಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂಪಾಯಿಯನ್ನು ಶುಕ್ರವಾರ ಹಂಚಿಕೆ ಮಾಡಲಾಗಿದೆ.