ಬೆಂಗಳೂರು: ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಟ್ಯಾಕ್ಸಿ ಪ್ರಯಾಣದರವನ್ನು ಹೆಚ್ಚಳ ಮಾಡಲಾಗಿದೆ.
ಟ್ಯಾಕ್ಸಿ ಮಾಲೀಕರ ಬೇಡಿಕೆಯಂತೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ವಿವಿಧ ಸ್ವರೂಪದ ಟ್ಯಾಕ್ಸಿಗಳ ಪ್ರಯಾಣ ದರ ಹೆಚ್ಚಳವಾಗಿದೆ. ಇಂಧನ ಬೆಲೆ ಭಾರೀ ಏರಿಕೆಯಾದ ಕಾರಣ ಪ್ರಯಾಣದರ ಹೆಚ್ಚಳಕ್ಕೆ ಟ್ಯಾಕ್ಸಿ ಮಾಲೀಕರಿಂದ ಒತ್ತಾಯಿಸಲಾಗಿತ್ತು. ಈ ಹಿನ್ನಲೆಯಲ್ಲಿ ಟ್ಯಾಕ್ಸಿ ಪ್ರಯಾಣದರ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.