ಹೈದರಾಬಾದ್: ತೆಲುಗು ದೇಶಂ ಪಕ್ಷದ ಮುಖಂಡ ಪುಲಿವರ್ತಿ ನಾನಿ ಎಂಬುವವರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆಂಧ್ರಪ್ರದೇಶದ ತಿರುಪತಿಯ ಚಂದ್ರಗಿರಿಯಲ್ಲಿ ನಡೆದಿದೆ.
ಚಂದ್ರಗಿರಿ ವಿಧನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅವ್ಯವಹಾರ ನಡೆದಿದೆ. ಸಾವಿರಾರು ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸಿ ಟಿಡಿಪಿಯ ಚಂದ್ರಗಿರಿ ಉಸ್ತುವಾರಿ ಪುಲಿವರ್ತಿ ನಾನಿ ಹಾಗೂ ಇತರ ಮುಖಂಡರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಟಿಡಿಪಿ ಮುಖಂಡರನ್ನು ಪೊಲೀಸರು ವಶಕ್ಕೆ ಒಪಡೆದಿದ್ದಾರೆ.
ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಪುಲಿವರ್ತಿ ನಾನಿ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ತಕ್ಷಣ ಪೊಲೀಸರು ಅವರನ್ನು ತಡೆದಿದ್ದಾರೆ. ಘಟನೆ ಬಳಿಕ ಮತ್ತೆ ಪೊಲೀಸರು ಪುಲಿವರ್ತಿ ನಾನಿ ಅವರನ್ನು ಹಾಗೂ ಇತರ ಮುಖಂಡರನ್ನು ಬಂಧಿಸಿದ್ದಾರೆ.