alex Certify ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯಗಳಲ್ಲಿನ ಅರೆಕಾಲಿಕ ಶಿಕ್ಷಕರು/ಬೋಧಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳಿಗೆ ದೈಹಿಕ/ಯೋಗ, ಸಂಗೀತ/ಕ್ರಾಫ್ಟ್ ಮತ್ತು ಸಮಾಜ ವಿಜ್ಞಾನ, ಆಂಗ್ಲ, ಗಣಿತ ಮತ್ತು ವಿಜ್ಞಾನ ಪಾಠ ಮಾಡುವ ಅರೆಕಾಲಿಕ ಶಿಕ್ಷಕರು/ಬೋಧಕರ ಸೇವೆಯನ್ನು ಪ್ರತಿ ಮಾಹೆಯಾನ 10000 ರೂ. ರಂತೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಪಡೆಯಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗdiತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100 ಅಡಿರಸ್ತೆ, ಆಲ್ಕೋಳ ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.12 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...