alex Certify ಶಾಲೆಯಲ್ಲೇ ಶಿಕ್ಷಕನಿಂದ ನೀಚ ಕೃತ್ಯ: ಬಿಸಿಯೂಟ ಕೊಠಡಿಗೆ ಕರೆದೊಯ್ದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲೇ ಶಿಕ್ಷಕನಿಂದ ನೀಚ ಕೃತ್ಯ: ಬಿಸಿಯೂಟ ಕೊಠಡಿಗೆ ಕರೆದೊಯ್ದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ.

ಎಂಟು ವರ್ಷದ ವಿದ್ಯಾರ್ಥಿನಿಯನ್ನು ಬಿಸಿಯೂಟದ ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದು, ಮನೆಗೆ ಹೋದ ಪೋಷಕರಿಗೆ ಬಾಲಕಿ ಮಾಹಿತಿ ನೀಡಿದ್ದಾಳೆ. ಮರ್ಯಾದೆಗೆ ಅಂಜಿದ ಪೋಷಕರು ಒಂದು ವಾರ ಕಳೆದರೂ ಯಾರಿಗೂ ಹೇಳಿರಲಿಲ್ಲ. ಬಳಿಕ ಸಂಬಂಧಿಕರಿಗೆ ವಿಷಯ ತಿಳಿಸಿದ್ದು, ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಲಾಗಿದೆ.

ಮಕ್ಕಳ ಸಹಾಯವಾಣಿ ಸಿಬ್ಬಂದಿ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ನವೆಂಬರ್ 21 ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...