ಬೆಂಗಳೂರು: 2014 -15 ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಆಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರಮವಾಗಿ ನೇಮಕಾತಿಯಾಗಿದ್ದ ಮತ್ತೊಬ್ಬ ಶಿಕ್ಷಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಭೈರವಾಡಗಿ ಪ್ರೌಢಶಾಲೆ ಶಿಕ್ಷಕ ಅಶೋಕ ಚೌಹಾಣ್ ಬಂಧಿತ ಆರೋಪಿ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಅಶೋಕ ಚೌಹಾಣ್ ಮೊದಲು ಚಿತ್ರದುರ್ಗ ಜಿಲ್ಲೆಯ ಜಗಳೂರಿನಲ್ಲಿ ಸೇವೆ ಸಲ್ಲಿಸಿದ್ದು, ನಂತರ ವಿಜಯಪುರ ಜಿಲ್ಲೆಗೆ ವರ್ಗಾವಣೆಯಾಗಿದ್ದ. ಈತನ ಬಂಧನದೊಂದಿಗೆ ಶಿಕ್ಷಕರ ನೇಮಕಾತಿ ಅಕ್ರಮದಲ್ಲಿ ಇದುವರೆಗೆ ಮೂವರನ್ನು ಬಂಧಿಸಲಾಗಿದೆ.