ಚೆನ್ನೈ: ವಿದ್ಯಾರ್ಥಿನಿಯರಿಗೆ ಶಿಕ್ಷಕ ಮದ್ಯ ಸೇವಿಸಲು ಒತ್ತಾಯಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಪ್ರಕರಣ ಸಂಬಂಧ ಶಿಕ್ಷಕನನ್ನು ಬಂಧಿಸಲಾಗಿದೆ.
ತಮಿಳುನಾಡಿನ ತೂತುಕುಡಿ ಜಿಲ್ಲೆಯ ಉದಂಗುಡಿಯ ಖಾಸಗಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಸಲ್ಮಾ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿನರಿಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿ ಶಿಕ್ಷಕ ಫೋನ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತೂತುಕುಡಿಯಲ್ಲಿ ವಲಯಮಟ್ಟದ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿತ್ತು ಶಾಲೆಯ 9 ವಿದ್ಯಾರ್ಥಿಗಳು ಹಾಗೂ 6 ವಿದ್ಯಾರ್ಥಿನಿಯರ ಜೊತೆ ದೈಹಿಕ ಶಿಕ್ಷಕ ಫೋನ್ ಸಿಂಗ್ ಕೂಡ ಹಾಸ್ಟೆಲ್ ನಲ್ಲಿ ಉಳಿದಿದ್ದರು. ಈ ವೇಳೆ ಶಿಕ್ಷಕ ವಿದ್ಯಾರ್ಥಿನಿಯರನ್ನು ಮದ್ಯ ಸೇವಿಸುವಂತೆ ಬಲವಂತ ಮಾಡಿದ್ದಾನೆ. ಕುಡಿಯದಿದ್ದರೆ ಮುಂದಿನ ಸ್ಪರ್ಧೆಯಲ್ಲಿ ಭಗವಹಿಸಲು ಬಿಡುವುದಿಲ್ಲ ಎಂದು ಹೆದರಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಶಾಲಾ ಆಡಳಿತ ಮಮ್ದಳಿಗೂ ತಿಳಿಸಿದ್ದಾರೆ. ಆದರೂ ಶಾಲಾ ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಕ್ರಮಕೈಗೊಂಡಿಲ್ಲ.
ಪೋಷಕರು ಶಾಲೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಶಾಲಾ ಆಡಳಿತ ಮಂದಳಿ ಶಿಕ್ಷಕನನ್ನು ವಜಾಗೊಳಿಸಿದೆ.