ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದ ವಿದ್ಯಾರ್ಥಿಯನ್ನು ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ್ದಾರೆ.
ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಶಿಕ್ಷಕಿ ಕ್ಷಮೆಯಾಚಿಸಿದ್ದಾರೆ.
ಹೊನ್ನಾವರದ ಸರ್ಕಾರಿ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಸಹಪಾಠಿಗೆ ಲವ್ ಲೆಟರ್ ನೀಡಿದ್ದರಿಂದ ಆಕ್ರೋಶಗೊಂಡ ಶಿಕ್ಷಕಿ ಥಳಿಸಿದ್ದರಿಂದ ಬಾಸುಂಡೆ ಬಂದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈಗಾಗಲೇ ಪ್ರಕರಣ ಇತ್ಯರ್ಥವಾಗಿದೆ ಎನ್ನಲಾಗಿದೆ.