
ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿಕ್ಷಕರ ವರ್ಗಾವಣೆ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.
ಪರಸ್ಪರ ವರ್ಗಾವಣೆ, ಪತಿ-ಪತ್ನಿ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಇತರೆ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಯ ಅವಕಾಶ ಕಲ್ಪಿಸಲಾಗಿದೆ.
ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಕೂಡ ಅಂಗೀಕಾರವಾಗಿದೆ. ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ವಿಲೀನಗೊಳಿಸಲಾಗುವುದು. ಒಂದೇ ಮಂಡಳಿಯಿಂದ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸಲಾಗುವುದು.