alex Certify SHOCKING: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಶಾಲೆಗೆ ಹೊರಟಿದ್ದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಸರ ದೋಚಿದ ದುಷ್ಕರ್ಮಿ

ಶಿವಮೊಗ್ಗ: ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ.

ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ನಿಂದ ಇಳಿದು ಅರಣ್ಯಪ್ರದೇಶವನ್ನು ದಾಟಿ ಶಾಲೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದಾನೆ. ಗಾಯಗೊಂಡ ಪ್ರಭಾವತಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...