ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಎಡಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೆಜಿಎಫ್, ತುಮಕೂರು, ಚಿತ್ರದುರ್ಗ, ಚಳ್ಳಕೆರೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಹಣ ನೀಡಿ ಅಕ್ರಮವಾಗಿ ಕೆಲಸಕ್ಕೆ ಸೇರಿದ್ದ 25 ಜನರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ 4 ಗಂಟೆಯಿಂದ 30 ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. 100 ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಸಿಐಡಿ ಪೊಲೀಸ್ ಅಧೀಕ್ಷಕ ರಮೇಶ್ ಬಾನೋತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. 25 ಜನರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.