alex Certify BREAKING: ಹಣ ಕೊಟ್ಟು ಅಕ್ರಮವಾಗಿ ಕೆಲಸಕ್ಕೆ ಸೇರಿದ್ದ 25 ಶಿಕ್ಷಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಣ ಕೊಟ್ಟು ಅಕ್ರಮವಾಗಿ ಕೆಲಸಕ್ಕೆ ಸೇರಿದ್ದ 25 ಶಿಕ್ಷಕರು ಅರೆಸ್ಟ್

ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಎಡಿ ಕಾರ್ಯಾಚರಣೆ ನಡೆಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೆಜಿಎಫ್, ತುಮಕೂರು, ಚಿತ್ರದುರ್ಗ, ಚಳ್ಳಕೆರೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಹಣ ನೀಡಿ ಅಕ್ರಮವಾಗಿ ಕೆಲಸಕ್ಕೆ ಸೇರಿದ್ದ 25 ಜನರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ 4 ಗಂಟೆಯಿಂದ 30 ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿದೆ. 100 ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಸಿಐಡಿ ಪೊಲೀಸ್ ಅಧೀಕ್ಷಕ ರಮೇಶ್ ಬಾನೋತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. 25 ಜನರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...