
ಬೆಂಗಳೂರು: ಖಾಸಗಿ ಶಾಲೆ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಿಸಬೇಕೆಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ಶಾಸಕ ಮಸಾಲೆ ಜಯರಾಮ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಮತ್ತು ಶಿರಾ ಶಾಸಕ ರಾಜೇಶ್ ಅವರು ಸಿಎಂಗೆ ಮನವಿ ಸಲ್ಲಿಸಿ, ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು, ಸಿಬ್ಬಂದಿಗೆ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕೊರೋನಾ ಕಾರಣದಿಂದ ವೇತನವಿಲ್ಲದೆ ಖಾಸಗಿ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಜೀವನ ನಡೆಸುವುದು ಕಷ್ಟವಾಗಿದೆ. ಅವರ ನೆರವಿಗೆ ಸರ್ಕಾರ ಮುಂದಾಗಿ ಪರಿಹಾರ ಘೋಷಿಸಬೇಕು ಎಂದು ಹೇಳಿದ್ದಾರೆ. ಇದಕ್ಕೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ, ಪರಿಹಾರ ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.