ಬೆಂಗಳೂರು: 2020 – 21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಜುಲೈ ಮೂರನೇ ವಾರದಲ್ಲಿ ನಡೆಯಲಿದ್ದು, ಸಿದ್ದತೆ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರನ್ನು ಬಿಡುಗಡೆಗೊಳಿಸಬೇಕೆಂದು ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಬಿಬಿಎಂಪಿ ಸೇರಿದಂತೆ ರಾಜ್ಯದ ಹಲವೆಡೆ ಶಿಕ್ಷಕರು ಕೋವಿಡ್ ಕಾರ್ಯದಲ್ಲಿ ನಿರತರಾಗಿದ್ದು, ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ. ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ಮಕ್ಕಳ ದಾಖಲಾತಿ ಪ್ರಕ್ರಿಯೆ ನಡೆಯಲಿದೆ, ಹೀಗಾಗಿ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಬೇಕಿದ್ದು, ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಹೇಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೊಡಗಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.