alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಪ್ರಕ್ರಿಯೆ ಕ್ಯಾನ್ಸಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಪ್ರಕ್ರಿಯೆ ಕ್ಯಾನ್ಸಲ್

ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಹೆಚ್ಚುವರಿ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಪ್ರಕ್ರಿಯೆ ಕೈಗೊಂಡಿದ್ದು, ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ. ಜನವರಿ 24ರಂದು ಕೌನ್ಸೆಲಿಂಗ್ ನಲ್ಲಿ ಯಾವುದಾದರೂ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯೋಜನೆ ಆದೇಶ ನೀಡಿದ್ದಲ್ಲಿ ಅದನ್ನು ಹಿಂಪಡೆಯಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...