
ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ ಮತಗಟ್ಟೆ 155ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಕವಿತಾ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.
ನೆಲಮಂಗಲ ತಾಲೂಕಿನ ಮಾರಗೊಂಡನಹಳ್ಳಿ ನಿವಾಸಿಯಾಗಿರುವ 35 ವರ್ಷದ ಕವಿತಾ ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಶಾಲೆಯಲ್ಲಿ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕವಿತಾ ಕೊನೆಯುಸಿರೆಳೆದಿದ್ದಾರೆ.