alex Certify ಬೀಡ್‌ನಲ್ಲಿ ಶಿಕ್ಷಕ ಆತ್ಮಹತ್ಯೆ: 6 ಜನರ ಕಿರುಕುಳ ಕಾರಣವೆಂದು ಸೂಸೈಡ್ ನೋಟ್‌ನಲ್ಲಿ ಉಲ್ಲೇಖ ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಡ್‌ನಲ್ಲಿ ಶಿಕ್ಷಕ ಆತ್ಮಹತ್ಯೆ: 6 ಜನರ ಕಿರುಕುಳ ಕಾರಣವೆಂದು ಸೂಸೈಡ್ ನೋಟ್‌ನಲ್ಲಿ ಉಲ್ಲೇಖ !

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಆಶ್ರಮ ಶಾಲೆಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕ್ಷಕ ಧನಂಜಯ್ ನಾಗರಗೋಜೆಯವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಶಿಕ್ಷಕರು 6 ಜನರ ಕಿರುಕುಳದಿಂದ ಬೇಸತ್ತು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸುಸೈಡ್ ನೋಟ್‌ನಲ್ಲಿ ಬರೆದಿದ್ದಾರೆ.

ಶಿಕ್ಷಕ ಧನಂಜಯ್ ನಾಗರಗೋಜೆಯವರು ಕಳೆದ 18 ವರ್ಷಗಳಿಂದ ಬೀಡ್‌ನ ಕೆಲ್ಗಾಂವ್ ಪ್ರದೇಶದ ಆಶ್ರಮ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕ ಧನಂಜಯ್ ನಾಗರಗೋಜೆಯವರು ಆತ್ಮಹತ್ಯೆಗೂ ಮುನ್ನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಶಾಲೆಯ 6 ಜನರಿಂದ ಕಿರುಕುಳ ಅನುಭವಿಸಿದ್ದಾಗಿ ಅವರು ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಇನ್ನೂ ಯಾರನ್ನೂ ಬಂಧಿಸಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...