ಬೆಂಗಳೂರು: ಒಂದರಿಂದ ಐದನೇ ತರಗತಿ ಬೋಧಿಸುವ ಪದವೀಧರ ಶಿಕ್ಷಕರಿಗೆ ಸಿಹಿಸುದ್ದಿ ನೀಡಲಾಗಿದೆ. ಪದವೀಧರ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿ ಬೋಧಿಸುತ್ತಿರುವ ಪದವೀಧರ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆರರಿಂದ ಎಂಟನೇ ತರಗತಿಗೆ ಪದೋನ್ನತಿ ನೀಡಲಾಗುವುದು.
ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಕ್ರಮ ಕೈಗೊಂಡಿದ್ದು, ಸೇವಾ ಜೇಷ್ಠತೆ ಆಧಾರದಲ್ಲಿ ಪದವೀಧರ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲಾಗುವುದು ಎಂದು ಹೇಳಲಾಗಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರೆಗೆ ಸುಮಾರು 80 ಸಾವಿರ ಪದವೀಧರ ಶಿಕ್ಷಕರು ಇದ್ದಾರೆ. ಇವರಲ್ಲಿ ಶೇಕಡಾ 50 ರಷ್ಟು ಪ್ರಮಾಣದಲ್ಲಿ ಅರ್ಹ ಪದವೀಧರ ಶಿಕ್ಷಕರಿಗೆ ಬಡ್ತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.