
ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ಎಂ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.
ಭರತ್ ಶಿಂದೆ(47) ಮೃತಪಟ್ಟ ಶಿಕ್ಷಕ. ರಾಯಬಾಗ ತಾಲೂಕಿನ ಬಿರಡಿ ಗ್ರಾಮದವರಾದ ಭರತ ಶಿಂದೆ ಅವರು ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ಎಂ ಕೆಪಿಎಸ್ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗುರುವಾರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಶಿಕ್ಷಕರ ನಿಧನಕ್ಕೆ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.