ಕಲಬುರಗಿ: ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕರ ಸೇವೆಯನ್ನು ಆದ್ಯತೆಯ ಮೇರೆಗೆ ಪ್ರೌಢಶಾಲೆಗೆ ನಿಯೋಜಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಕಲ್ಬುರ್ಗಿ ವಿಭಾಗದಲ್ಲಿ ಶಿಕ್ಷಣ ಕಲ್ಯಾಣಕ್ಕಾಗಿ ಪದವೀಧರ ಶಿಕ್ಷಕರನ್ನು ಪ್ರೌಢಶಾಲೆಗೆ ನಿಯೋಜಿಸಲು ಕ್ರಮಕೈಗೊಳ್ಳಲಾಗಿದೆ. ಸದ್ಯ ಒಂದರಿಂದ ಐದನೇ ತರಗತಿ ಶಾಲೆಗಳು ಆರಂಭವಾಗಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಕಲ್ಬುರ್ಗಿ, ಬೀದರ್, ಯಾದಗಿರಿ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ಪದವೀಧರ ಶಿಕ್ಷಕರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಒಂದರಿಂದ ಐದನೇ ತರಗತಿಯಲ್ಲಿರುವ ಪದವೀಧರ ಶಿಕ್ಷಕರನ್ನು ಪ್ರೌಢಶಾಲೆಗೆ ನಿಯೋಜಿಸಲಾಗುವುದು. ಈ ಮೂಲಕ ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ. ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಕೊರತೆ ಹಿನ್ನೆಲೆಯಲ್ಲಿ ಪದವೀಧರ ಶಿಕ್ಷಕರ ಸೇವೆ ಬಳಸಿಕೊಳ್ಳಲಾಗುವುದು ಎನ್ನಲಾಗಿದೆ.