ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ತಾತ್ಕಾಲಿಕ ಸ್ಥಗಿತಗೊಳಿಸಿದೆ.
ಡಿಸೆಂಬರ್ 24 ರಿಂದ ಜನವರಿ 10 ರವರೆಗೆ 2020 -21 ನೇ ಸಾಲಿನ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕರ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ನಡೆಸಬೇಕಿತ್ತು.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಮೈಸೂರು ವಿಭಾಗದ ಒಳಗಿನ ಕೋರಿಕೆ ವರ್ಗಾವಣೆಗೆ ತಡೆಯಾಜ್ಞೆ ನೀಡಿರುವುದರಿಂದ ತಾತ್ಕಾಲಿಕವಾಗಿ ಮೈಸೂರು ವಿಭಾಗದ ವರ್ಗಾವಣೆ ಮುಂದೂಡಲಾಗಿದೆ. ಕೌನ್ಸೆಲಿಂಗ್ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.