
ಬೆಂಗಳೂರು: 15,000 ಸರ್ಕಾರಿ ಶಾಲೆ ಪದವೀಧರ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ.
ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಸರ್ಕಾರಿ ಶಾಲೆಗಳ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಸಚಿವರು ಶುಕ್ರವಾರ ಬಿಡುಗಡೆ ಮಾಡಲಿದ್ದಾರೆ.
ಶುಕ್ರವಾರ ಸಂಜೆ 5:30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಲ್ಲಿ ಸಚಿವರು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡುವರು. ನಂತರ ಆಕ್ಷೇಪಣೆ ಆಹ್ವಾನಿಸಿ ಬಳಿಕ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.